TSK

TSK · ಆದಿಕಾಂಡ 4:12

Treasury of Scripture Knowledge references in ಕನ್ನಡ IRV.

Back to passage

ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.

ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.

ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.

ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.