TSK

TSK · ಆದಿಕಾಂಡ 4:15

Treasury of Scripture Knowledge references in ಕನ್ನಡ IRV.

Back to passage

¶ “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.

ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.

ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.

ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.

ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.

¶ ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,