TSK

TSK · ಆದಿಕಾಂಡ 41:37

Treasury of Scripture Knowledge references in ಕನ್ನಡ IRV.

Back to passage

¶ ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.