TSK

TSK · ಆದಿಕಾಂಡ 41:52

Treasury of Scripture Knowledge references in ಕನ್ನಡ IRV.

Back to passage

ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.

ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.

ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.

ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.

ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.

¶ ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.

“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.