¶ ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
TSK
TSK · ಆದಿಕಾಂಡ 42:21
Treasury of Scripture Knowledge references in ಕನ್ನಡ IRV.
¶ ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
¶ “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
¶ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.
ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
¶ ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
‹ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.›
‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›
‹ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.›
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.