TSK

TSK · ಆದಿಕಾಂಡ 42:38

Treasury of Scripture Knowledge references in ಕನ್ನಡ IRV.

Back to passage

¶ ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

¶ ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.

ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.

ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.

ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.

ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.

ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.