TSK

TSK · ಆದಿಕಾಂಡ 43:28

Treasury of Scripture Knowledge references in ಕನ್ನಡ IRV.

Back to passage

ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.

¶ ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.

ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.

ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಿದನು.