TSK

TSK · ಆದಿಕಾಂಡ 44:28

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.

ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.