TSK

TSK · ಆದಿಕಾಂಡ 47:12

Treasury of Scripture Knowledge references in ಕನ್ನಡ IRV.

Back to passage

ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.

ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.

ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.

ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.

ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.

‹ಹೇಗೆಂದರೆ›‹‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ›‹ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.›

ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.