TSK

TSK · ಆದಿಕಾಂಡ 47:24

Treasury of Scripture Knowledge references in ಕನ್ನಡ IRV.

Back to passage

ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.

ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.

¶ ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.

ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.

ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.

ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.