TSK

TSK · ಆದಿಕಾಂಡ 49:23

Treasury of Scripture Knowledge references in ಕನ್ನಡ IRV.

Back to passage

ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.

ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.

ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.

ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.