TSK

TSK · ಆದಿಕಾಂಡ 49:29

Treasury of Scripture Knowledge references in ಕನ್ನಡ IRV.

Back to passage

ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.

ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.

¶ ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.

¶ ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.

ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.

ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,