TSK

TSK · ಆದಿಕಾಂಡ 9:1

Treasury of Scripture Knowledge references in ಕನ್ನಡ IRV.

Back to passage

¶ ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.

ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.

ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.

ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.

ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.