TSK

TSK · ಇಬ್ರಿಯರಿಗೆ 12:13

Treasury of Scripture Knowledge references in ಕನ್ನಡ IRV.

Back to passage

ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.

ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”

ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.

ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.

¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,