TSK

TSK · ಇಬ್ರಿಯರಿಗೆ 13:16

Treasury of Scripture Knowledge references in ಕನ್ನಡ IRV.

Back to passage

ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.

‹ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;›

¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.

ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.