TSK

TSK · ಇಬ್ರಿಯರಿಗೆ 4:7

Treasury of Scripture Knowledge references in ಕನ್ನಡ IRV.

Back to passage

¶ ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.

ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, ‹“ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?›

‹“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ› ‹ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು› ‹ಕರ್ತನು ನನ್ನ ಒಡೆಯನಿಗೆ ನುಡಿದನು’› ‹ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.›

ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.

ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”