TSK

TSK · ಇಬ್ರಿಯರಿಗೆ 7:13

Treasury of Scripture Knowledge references in ಕನ್ನಡ IRV.

Back to passage

ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

¶ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.

ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.