TSK

TSK · ಯೆಶಾಯ 21:13

Treasury of Scripture Knowledge references in ಕನ್ನಡ IRV.

Back to passage

ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.

¶ ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.

ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.

ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.

ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.