TSK

TSK · ಯೆಶಾಯ 24:7

Treasury of Scripture Knowledge references in ಕನ್ನಡ IRV.

Back to passage

ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.

ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”

ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.