ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
TSK
TSK · ಯೆಶಾಯ 29:21
Treasury of Scripture Knowledge references in ಕನ್ನಡ IRV.
ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.
“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
¶ ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
¶ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.