TSK

TSK · ಯೆಶಾಯ 32:18

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.

ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.

ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.

ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”

¶ “‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.

ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.

ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.