TSK

TSK · ಯೆಶಾಯ 38:13

Treasury of Scripture Knowledge references in ಕನ್ನಡ IRV.

Back to passage

ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.

ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.

ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.

ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.

ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;

ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.