TSK

TSK · ಯೆಶಾಯ 38:8

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.

ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು