TSK

TSK · ಯೆಶಾಯ 45:2

Treasury of Scripture Knowledge references in ಕನ್ನಡ IRV.

Back to passage

ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.

ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.

ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.

ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.