TSK

TSK · ಯೆಶಾಯ 45:6

Treasury of Scripture Knowledge references in ಕನ್ನಡ IRV.

Back to passage

ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”

ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

¶ “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.