TSK

TSK · ಯೆಶಾಯ 47:4

Treasury of Scripture Knowledge references in ಕನ್ನಡ IRV.

Back to passage

ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.

ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.

ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ, ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.

ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.