TSK

TSK · ಯೆಶಾಯ 6:8

Treasury of Scripture Knowledge references in ಕನ್ನಡ IRV.

Back to passage

¶ ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.

ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

¶ ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.

ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?

ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.

ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.

ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

‹ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.›

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ