TSK

TSK · ಯೆಶಾಯ 61:9

Treasury of Scripture Knowledge references in ಕನ್ನಡ IRV.

Back to passage

¶ ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”

ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.