TSK

TSK · ಯಾಕೋಬನು 5:15

Treasury of Scripture Knowledge references in ಕನ್ನಡ IRV.

Back to passage

ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಆತನು ಅವರಿಗೆ, ‹“ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.›‹ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,›

ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, ‹“ಮಗನೇ, ನಿನ್ನ›‹ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.

¶ ‹“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;›

ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.

ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.