TSK

TSK · ಯೆರೆಮಿಯ 13:21

Treasury of Scripture Knowledge references in ಕನ್ನಡ IRV.

Back to passage

ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.

ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.

ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!

ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.

ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.