TSK

TSK · ಯೆರೆಮಿಯ 21:9

Treasury of Scripture Knowledge references in ಕನ್ನಡ IRV.

Back to passage

ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.

ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.

ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.