TSK

TSK · ಯೆರೆಮಿಯ 46:13

Treasury of Scripture Knowledge references in ಕನ್ನಡ IRV.

Back to passage

¶ ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.

‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.

ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.