TSK

TSK · ಯೆರೆಮಿಯ 9:21

Treasury of Scripture Knowledge references in ಕನ್ನಡ IRV.

Back to passage

ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.

¶ ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.

ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.

ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!