TSK

TSK · ಯೋಬನು 13:26

Treasury of Scripture Knowledge references in ಕನ್ನಡ IRV.

Back to passage

ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.

ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.

ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.

ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”

ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, ‹“ನಿನಗೆ ಸ್ವಸ್ಥವಾಯಿತಲ್ಲಾ;›‹ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು”› ಎಂದನು.