TSK

TSK · ಯೋಬನು 15:21

Treasury of Scripture Knowledge references in ಕನ್ನಡ IRV.

Back to passage

¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,

¶ ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ,

ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?

ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.

ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.

“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.