TSK

TSK · ಯೋಬನು 2:8

Treasury of Scripture Knowledge references in ಕನ್ನಡ IRV.

Back to passage

¶ ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.

ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.

ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,

ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›