TSK

TSK · ಯೋಬನು 2:9

Treasury of Scripture Knowledge references in ಕನ್ನಡ IRV.

Back to passage

¶ ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.

ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.

ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ