TSK

TSK · ಯೋಬನು 21:4

Treasury of Scripture Knowledge references in ಕನ್ನಡ IRV.

Back to passage

ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.

ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.

ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.

ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.

ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.