TSK

TSK · ಯೋಬನು 4:13

Treasury of Scripture Knowledge references in ಕನ್ನಡ IRV.

Back to passage

¶ ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.

ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

¶ ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.

ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.

ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,

ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,