TSK

TSK · ಯೋವೇಲ 2:30

Treasury of Scripture Knowledge references in ಕನ್ನಡ IRV.

Back to passage

ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.

ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.

ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?

¶ ‹ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;› ‹“‘ಸೂರ್ಯನು ಕತ್ತಲಾಗಿ ಹೋಗುವನು.›

¶ ‹“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.›

¶ ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.

ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.