TSK

TSK · ಯೋವೇಲ 3:4

Treasury of Scripture Knowledge references in ಕನ್ನಡ IRV.

Back to passage

¶ ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.

ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.

ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.

ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”

ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.

ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”

ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.