TSK

TSK · ಯೋಹಾನನು 11:1

Treasury of Scripture Knowledge references in ಕನ್ನಡ IRV.

Back to passage

¶ ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.

¶ ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,

‹ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.›

ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.

¶ ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.

ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.