TSK

TSK · ಯೋಹಾನನು 11:53

Treasury of Scripture Knowledge references in ಕನ್ನಡ IRV.

Back to passage

ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.

ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.

¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

¶ ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.

¶ ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.