ಯೋಹಾನನು 2:25
TSK
ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
TSK
Treasury of Scripture Knowledge references in ಕನ್ನಡ IRV.
ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
¶ ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, ‹“ನಾನು›‹ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ”› ಎಂದು ಸಾಕ್ಷಿ ಹೇಳಿದನು.
‹ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.›‹ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.›