TSK

TSK · ಯೋಹಾನನು 13:17

Treasury of Scripture Knowledge references in ಕನ್ನಡ IRV.

Back to passage

¶ ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.

ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.

‹ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ”› ಅಂದನು.

ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.

‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.

ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.

ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.