TSK

TSK · ಯೋಹಾನನು 15:12

Treasury of Scripture Knowledge references in ಕನ್ನಡ IRV.

Back to passage

‹ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.›

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

¶ ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.

ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.

ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.