TSK

TSK · ಯೋಹಾನನು 15:7

Treasury of Scripture Knowledge references in ಕನ್ನಡ IRV.

Back to passage

ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.

ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.

ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.

ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.

¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›

‹ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.›

‹ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,›‹ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.›

¶ ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.

ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

¶ ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;