TSK

TSK · ಯೋಹಾನನು 15:9

Treasury of Scripture Knowledge references in ಕನ್ನಡ IRV.

Back to passage

‹ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.›

‹ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,›‹ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ”› ಎಂದನು.

ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,