TSK

TSK · ಯೋಹಾನನು 18:17

Treasury of Scripture Knowledge references in ಕನ್ನಡ IRV.

Back to passage

¶ ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.

¶ ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.

ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ ‹“ನಾನೇ ಆತನು”› ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.

ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.