TSK

TSK · ಯೋಹಾನನು 19:28

Treasury of Scripture Knowledge references in ಕನ್ನಡ IRV.

Back to passage

ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.

‹ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.›

‹ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು”› ಎಂದು ಹೇಳಿದನು.

ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ ‹“ನೀವು ಯಾರನ್ನು ಹುಡುಕುತ್ತೀರಿ?”› ಎಂದು ಕೇಳಿದನು.

ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, ‹“ತೀರಿತು”› ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.